ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ, ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಮೋಹನ ಆಳ್ವ ಇವರನ್ನು ಸನ್ಮಾನಿಸಿ, ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಸಾಂಸ್ಕೃತಿಕ ಕಲಾಪ್ರಕಾರಗಳು ಬಹಳ ಸಹಕಾರವಾಗುತ್ತವೆ. ಪುರಾಣದಲ್ಲಿ ಬರುವ ಕಥೆಗಳನ್ನು ಕಲೆಗಳ ಮುಖಾಂತರ ತಿಳಿಸಿ ಸುಲಭವಾಗಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಬಹುದು. ಕರಾವಳಿಯ ಹಾಗೂ ದೇಶದ ಎಲ್ಲ ಪ್ರಕಾರಗಳನ್ನು ಆಳ್ವರು ತಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಎಲ್ಲ ಕಡೆ ಪ್ರದರ್ಶಿಸಿ ಕಲೆಗಳಿಗೆ ಹಾಗೂ ಕಲಾವಿದರಿಗೆ ಪ್ರೋತ್ಸಹ ನೀಡುತ್ತಿದ್ದಾರೆ. ನಮ್ಮ ಪರ್ಯಾಯದ ಎರಡು ವರ್ಷಗಳಲ್ಲಿ ನಿರಂತರವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾಭಿಮಾನಿಗಳು ಪ್ರೋತ್ಸಾಹ ನೀಡಬೇಕೆಂದು ಅನುಗ್ರಹ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಮೋಹನ ಆಳ್ವ,ಪರ್ಯಾಯೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ,ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರು,ಖಜಾಂಚಿ ರವಿಪ್ರಸಾದ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳ ವಿಭಾಗದ ಸಂಚಾಲಕರಾದ ಪ್ರೊ.ಎಂ.ಎಲ್ .ಸಾಮಗ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ನೀಡಿದರು.
ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ “ಸಾಂಸ್ಕೃತಿಕ ವೈಭವ” ನಡೆಯಿತು.